ಬೆಂಗಳೂರು,ಜು,17,2019(www.justkannada.in): ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಅತೃಪ್ತ ಶಾಸಕ ರಾಮಲಿಂಗರೆಡ್ಡಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆಯಲು ತೀರ್ಮಾನಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಜಿ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ರಾಜೀನಾಮೆ ಬಗ್ಗೆ ಸ್ಪೀಕರ್ ಬಳಿ ತಿಳಿಸುತ್ತೇನೆ. ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳುವ ಮೂಲಕ ರಾಮಲಿಂಗರೆಡ್ಡಿ ಅವರು ಪಕ್ಷ ತೊರೆಯದ ನಿರ್ಧಾರಕ್ಕೆ ಬಂದಿದ್ದಾರೆ.
ಇನ್ನು ನಾಳೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಲಿದ್ದು, ಈ ವೇಳೆ ಸದನದಲ್ಲೂ ಹಾಜರಿರಲು ರಾಮಲಿಂಗರೆಡ್ಡಿ ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಿನ್ನೆ ಪ್ರತಿಕ್ರಿಯಿಸಿದ್ದ ರಾಮಲಿಂಗರೆಡ್ಡಿ, ವಿಶ್ವಾಸಮತಯಾಚನೆ ವೇಳೆ ಸದನದಲ್ಲಿ ಹಾಜರಿರುತ್ತೇನೆ. ಅಂದು ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದರು. ಇದೀಗ ಸದನಕ್ಕೆ ಹಾಜರಾಗುವುದಾಗಿ ನಿರ್ಧಾರ ಕೈಗೊಂಡಿದ್ದು ರಾಜೀನಾಮೆ ವಾಪಸ್ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Key words: Decision -continue – Congress party-MLA -Ramalingareddy