ನವದೆಹಲಿ, ನವೆಂಬರ್ 17, 2019 (www.justkannada.in): 2020ರ ಮಾರ್ಚ್ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಯನ್ನು ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.
ವಿಮಾನಯಾನ ಸಂಸ್ಧೆ ಏರ್ ಇಂಡಿಯಾ ಮಾರಾಟದ ಸಂಬಂಧ ಅಂತಾರಾಷ್ಟ್ರೀಯ ರೋಡ್ ಶೋಗಳಲ್ಲಿ ಹೂಡಿಕೆದಾರರಿಂದ ವ್ಯಾಪಕ ಆಸಕ್ತಿ ವ್ಯಕ್ತವಾಗಿದೆ. ಒಂದು ವರ್ಷದ ಹಿಂದೆಯೇ ಮಾರಾಟ ಮಾಡುವ ಪ್ರಕ್ರಿಯೆ ನಡೆದಿತ್ತು.