ನವದೆಹಲಿ,ಸೆ,20,2019(www.justkannada.in) ಅಗತ್ಯ ವಸ್ತುಗಳ ಮೇಲಿನ ತೆರಿಗೆ ಇಳಿಕೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನ ಶೆ.25ರಿಂದ ಶೇ.22ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಸುಗ್ರೀವಾಜ್ಞೆ ಮೂಲಕ ಗೃಹಬಳಕೆ ವಸ್ತುಗಳ ಮೇಲಿನ ತೆರಿಗೆ ವಿನಾಯ್ತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬಿಸ್ಕೇಟ್ ಕಂಪನಿ ಅಟೋಮೊಬೈಲ್ ಕ್ಷೇತ್ರ ಮತ್ತು ಗೃಹಬಳಕೆ ವಸ್ತುಗಳ ಮೇಲೆ ಹೂಡಿಕೆಗೆ ಉತ್ತೇಜಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಈ ಮೂಲಕ ಕೇಂದ್ರ ಸರ್ಕಾರ ಗೃಹಬಳಕೆ ವಸ್ತುಗಳ ಉತ್ಪಾದನಾ ಕಂಪನಿಗಳಿಗೆ ಸಿಹಿಸುದ್ದಿ ನೀಡಿದೆ.
Key words: Decision -tax exemption – essential items- Union -Finance Minister -Nirmala Sitharaman ….