ಬೆಂಗಳೂರು, ಜುಲೈ 26, 2023 (www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಒಟ್ಟು 12 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಈ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ದುರ್ಬಲವಾಗಿರುವ ಮಾನ್ಸೂನ್ ಮುಂದಿನ ನಾಲ್ಕು ದಿನಗಳವರೆಗೆ ತುಂಬಾ ತೀವ್ರವಾಗಿರಲಿದೆ.
ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಜತೆಗೆ ಉತ್ತರ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.
ಮುಂಬೈನಲ್ಲಿ ಭಾರಿ ಮಳೆಯಿಂದಾಗಿ ಸೋಮವಾರ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಿದೆ.
ತೆಲಂಗಾಣ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕದ ಕರಾವಳಿಯ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಯಮುನಾ ನದಿಯ ಉಪನದಿಯಾದ ಹಿಂಡನ್ ಕೂಡ ಅತಿಯಾದ ಮಳೆಯಿಂದಾಗಿ ಪರ್ವತಗಳಲ್ಲಿ ಹಾನಿಯನ್ನುಂಟು ಮಾಡುತ್ತಿದೆ. ಈ ಕಾರಣದಿಂದಾಗಿ ನೋಯ್ಡಾ, ಗಾಜಿಯಾಬಾದ್’ನ ಅನೇಕ ಪ್ರದೇಶಗಳನ್ನ ಸ್ಥಳಾಂತರಿಸಲಾಗಿದೆ.