ಪರಿಷತ್ ಚುನಾವಣೆಯಲ್ಲಿ ತಮ್ಮ ಸೋಲಿನ ಬಗ್ಗೆ ರಘು ಕೌಟಿಲ್ಯ ಹೇಳಿದ್ದೇನು ಗೊತ್ತೆ..

ಮೈಸೂರು,ಡಿಸೆಂಬರ್,17,2021(www.justkannada.in): ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಸೋಲಿನ ಬಗ್ಗೆ  ಪರಾಜಿತ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘು ಕೌಟಿಲ್ಯ ಹೇಳಿದ್ದಿಷ್ಟು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಎರಡೂ ಜಿಲ್ಲೆಗಳ ಮುಖಂಡರು, ಕಾರ್ಯಕರ್ತರು, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಸಂಸದರಾದ ಶ್ರೀನಿವಾಸ ಪ್ರಸಾದ್, ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಸಂಘಟಿತ ಹೋರಾಟ ಮಾಡಿದರು. ಆದರೆ ಎರಡನೇ ಬಾರಿಯೂ ಮತದಾರರು ನನ್ನನ್ನು ವಿಜಯದ ದಡ ಸೇರಿರಲಿಲ್ಲ ಈ ಬಾರಿ ವಿಜಯದ ದಡ ಸೇರಿಸುತ್ತಾರೆಂಬ ವಿಶ್ವಾಸವಿತ್ತು. ಆದರೆ ಅಂತಿಮ ಘಟ್ಟದಲ್ಲಿ ತೆಪ್ಪದಲ್ಲಿ ಕುಳಿತು ಹೋರಾಡುವಂತಾಯಿತು. ಚುನಾವಣೆ ಸೋಲಿನಿಂದ ವಿಚಲಿತನಾಗಿಲ್ಲ. ಪಕ್ಷದ ಸೇವೆಯಲ್ಲಿ ನಿರಂತರವಾಗಿ ಮುಂದುವರೆಯುತ್ತೇನೆ. ಮತದಾರರು ನಮ್ಮನ್ನು ಪರಿಪೂರ್ಣವಾಗಿ ಸ್ವೀಕಾರ ಮಾಡದ ನೋವಿದೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ನಾನು ಗೆಲ್ಲುವ ವಿಶ್ವಾವಿತ್ತು. ಸೈದ್ದಾಂತಿಕ ಹೋರಾಟದ ಮೂಲಕ ಬಂದ ನನಗೆ ವಿಧಾನ ಪರಿಷತ್ ಪ್ರವೇಶಿಸಲು ಸಾಧ್ಯವಾಗದ್ದು ನೋವುಂಟು ಮಾಡಿದೆ‌ ಎಂದು ರಘು ಕೌಟಿಲ್ಯ ಬೇಸರ ವ್ಯಕ್ತಪಡಿಸಿದರು.

ಚುನಾವಣೆ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ.

ಚುನಾವಣೆ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಯಾರ ಒಳ ಏಟಿನಿಂದ ನನಗೆ ಸೋಲಾಗಿಲ್ಲ. ನನ್ನ ಚುನಾವಣೆ ಸೋಲಿಗೆ ಯಾರನ್ನೂ ದೂರುವುದಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ನವರು ಮೇಲ್ನೋಟಕ್ಕೆ ಆಗದವರಂತೆ ಇದ್ದರೂ ಒಳಗೊಳಗೆ ಚೆನ್ನಾಗಿರುತ್ತಾರೆ. ಕಾಂಗ್ರೆಸ್-ಜೆಡಿಎಸ್ ನ ಅನೈತಿಕ ಒಳ ಒಪ್ಪಂದವೂ ನನ್ನ ಸೋಲಿಗೆ ಕಾರಣವಿರಬಹುದು ಎಂದು ರಘು ಕೌಟಿಲ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಎಂ ಎಲ್ ಸಿ‌, ಎಚ್ ವಿಶ್ವನಾಥ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಅದು ನನಗೆ ಗೊತ್ತಿಲ್ಲ. ಎಚ್ ವಿಶ್ವನಾಥ್ ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಸದ್ಯಕ್ಕೆ ನನಗೆ ಚುನಾವಣೆ ರಾಜಕಾರಣದ ಬಗ್ಗೆ ಭ್ರಮ ನಿರಸನವಾಗಿದೆ. ನಾನು ಮುಂದೆ ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ ಅಷ್ಟೇ ಎಂದು ರಘು ಕೌಟಿಲ್ಯ ನುಡಿದರು.

ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಶ್ರೀವತ್ಸ ಸೇರಿದಂತೆ ಇತರರು ಉಪಸ್ಥಿತರಿದ್ದರು.

Key words: Defeated -BJP candidate -Raghu Kautilya – defeat –mysore-lagislative council- elections

ENGLISH SUMMARY…

BJP candidate Raghu Koutilya on his failure in LC polls
Mysuru, December 17, 2021 (www.justkannada.in): The BJP candidate for the Legislative Council polls from Mysuru-Chamarajanagara Legislative Council, who lost the election, addressed a press meet today in Mysuru.
“Several BJP leaders, including the former Chief Minister B.S. Yediyurappa, leaders of both the districts, activists, District Incharge Minister Somashekar, MP Srinivas Prasad and Pratap Simha, and all the BJP MLAs made concerted efforts to ensure my victory in the LC polls. But I could not win even on my second attempt. I was very confident of winning this time. However, I won’t get distracted by this failure. I will continue to serve the party. I have the pain of people not accepting me. My struggle in life has been based on principles, but this failure has caused me pain,” he said.
He also said that he won’t make anyone responsible for his failure and blame himself. “The Congress-JDS secret alliance might also be the reason for my failure,” he added.
BJP District President Mangala Somashekar, City President Srivatsa, and others were present at the press meet.
Keywords: Raghu R./ LC Polls/ failure