ನವದೆಹಲಿ,ಜನವರಿ,7,2025 (www.justkannada.in): ಇಂದು ದೆಹಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಭಾರತದ ಚುನಾವಣಾ ಆಯೋಗವು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಧ್ಯಾಹ್ನ 2 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನ ಚುನಾವಣಾ ಆಯೋಗ ಪ್ರಕಟಿಸಲಿದೆ.
ದೆಹಲಿ ಮುಖ್ಯ ಚುನಾವಣಾ ಅಧಿಕಾರಿ ಪ್ರಕಟಿಸಿದ ಮತದಾರರ ಪಟ್ಟಿಯ ಪ್ರಕಾರ 18-19 ವರ್ಷ ವಯಸ್ಸಿನ 2.08 ಲಕ್ಷ ಮೊದಲ ಬಾರಿಗೆ ಮತದಾನ ಮಾಡುವವರು ಸೇರಿದಂತೆ 1.55 ಕೋಟಿಗೂ ಹೆಚ್ಚು ಮತದಾರರು ದೆಹಲಿಯಲ್ಲಿ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ.
2020ರ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ AAP 62 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಎಂಟು ಸ್ಥಾನಗಳನ್ನು ಪಡೆದುಕೊಂಡಿತ್ತು.
Key words: Dates, Delhi, Assembly elections, announce, today