ನವದೆಹಲಿ,ಜನವರಿ,7,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಫೆಬ್ರವರಿ 5 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಘೊಷಣೆ ಮಾಡಿದೆ.
ಇಂದು ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದರು.
ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯಲಿದ್ದು ಫೆಬ್ರವರಿ 8 ರಂದು ಫಲಿತಾಂಶ ಹೊರ ಬೀಳಲಿದೆ. ಜನವರಿ 10 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ಜನವರಿ 17ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದೆ. ಜ.18 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು ಜ.20 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
Key words: Delhi, Assembly elections, Feb. 5