ನವದೆಹಲಿ,ಡಿಸೆಂಬರ್,1,2020(www.justkannada.in): ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ ಸುಧಾರಣಾ ಕಾಯ್ದೆಯನ್ನ ವಿರೋಧಿಸಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ದೆಹಲಿ ಚಲೋ 6ನೇ ದಿನಕ್ಕೆ ಕಾಲಿಟ್ಟಿದೆ.
ಪಂಜಾಬ್, ಉತ್ತರ ಪ್ರದೇಶ ಸೇರಿ ವಿವಿಧ ರಾಜ್ಯಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಜತೆ ಇಂದು ಮಾತುಕತೆ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈತ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಮಾತುಕತೆ ನಡೆಯಲಿದೆ.
ಈ ಮಧ್ಯೆ ಗೃಹ ಸಚಿವ ಅಮಿತ್ ಶಾ ಅವರು ಬಿಕೆಯು (ಏಕತಾ ಉಗ್ರಹಾನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಹಾನ್ ಮತ್ತು ಬಿಕೆಯು (ಏಕತಾ ದಕುಂದಾ) ಅಧ್ಯಕ್ಷ ಬೂಟಾ ಸಿಂಗ್ ಬುರ್ಜ್ಗಿಲ್ ಜತೆ ದೂರವಾಣಿ ಮೂಲಕ ಮಾತನಾಡಿ, ಷರತ್ತು ಹಿತವಾಗಿ ಮಾತುಕತೆ ನಡೆಸಲು ಮನವೊಲಿಸಿದ್ದಾರೆ ಎನ್ನಲಾಗಿದೆ.
Key words: Delhi Chalo –farmer-Union Agriculture Minister – talks – protesting- farmers leaders