ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಜೈಲೇ ಗತಿ: ಜಾಮೀನಿಗೆ ತಡೆ ನೀಡಿದ ಹೈಕೋರ್ಟ್

ವದೆಹಲಿ,ಜೂನ್,25,2024 (www.justkannada.in): ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ದೆಹಲಿ ಹೈಕೋರ್ಟ್ ನಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಭಾರಿ ಹಿನ್ನಡೆಯಾಗಿದೆ.

ಪ್ರಕರಣ ಸಂಬಂಧ ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ದೆಹಲಿ ಹೈಕೋರ್ಟ್  ತಡೆ ನೀಡಿದೆ. ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶವನ್ನು ತಡೆಹಿಡಿಯುವ ಜಾರಿ ನಿರ್ದೇಶನಾಲಯದ ಮನವಿಗೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರ ನ್ಯಾಯಪೀಠವು ಜೂನ್ 20 ರಂದು ವಿಚಾರಣಾ ನ್ಯಾಯಾಲಯ ನೀಡಿದ ಅರವಿಂದ್ ಕೇಜ್ರಿವಾಲ್ ಜಾಮೀನು ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಏಜೆನ್ಸಿ ಪ್ರಶ್ನಿಸಿದ ನಂತರ ನ್ಯಾಯಪೀಠವು ಜೂನ್ 21 ರಂದು ಆದೇಶವನ್ನು ಕಾಯ್ದಿರಿಸಿತ್ತು, ಇದನ್ನು ತೀರ್ಪು ಬರುವವರೆಗೆ ತಡೆಹಿಡಿಯಲಾಗಿದೆ. ಹೀಗಾಗಿ ಅರವಿಂದ ಕೇಜ್ರಿವಾಲ್ ಜೈಲಲ್ಲೆ ಇರಬೇಕಾಗುತ್ತದೆ.

Key words: Delhi CM, Arvind Kejriwal, High Court,  bail