ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಬಿಗ್ ರಿಲೀಫ್: ಮಧ್ಯಂತರ ಜಾಮೀನು ಮಂಜೂರು

ನವದೆಹಲಿ,ಜುಲೈ,12,2024 (www.justkannada.in): ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ  ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು,  ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಜಾರಿ ನಿರ್ದೇಶನಾಲಯಿಂದ ತನ್ನ ಬಂಧನವನ್ನು ಪ್ರಶ್ನಿಸಿ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ ಜೈಲಿಗೆ ಬಂದು ಜೂನ್ 2ರಂದು ಶರಣಾಗಿದ್ದರು.

Key  words: Delhi CM, Arvind Kejriwal, Interim bail,  granted