ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನವದೆಹಲಿ,ಜುಲೈ,25,2024 (www.justkannada.in):  ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿಯನ್ನ ಆಗಸ್ಟ್​ 8ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶಿಸಿದೆ.

ಅರವಿಂದ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ರೋಸ್ ಅವೆನ್ಯೂ ಕೋರ್ಟ್ ಆಗಸ್ಟ್​ 8ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಿಂದ ಜೈಲಿನಲ್ಲಿದ್ದಾರೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಮೇ 10 ರಂದು, ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು. ಚುನಾವಣೆ ಮುಗಿದ ತಕ್ಷಣ ಜೂನ್ 2ರಂದು ಜೈಲಿಗೆ ಮರಳಿದ್ದರು.

Key words: Delhi CM, Arvind Kejriwal, judicial custody