ನವದೆಹಲಿ,ನವೆಂಬರ್20,2024 (www.justkannada.in): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯದ ಮಟ್ಟವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಆಮ್ ಆದ್ಮಿ ಪಕ್ಷ ಸರ್ಕಾರವು ತನ್ನ 50 ಪ್ರತಿಶತದಷ್ಟು ಸರ್ಕಾರಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಮಾಡುವಂತೆ ಆದೇಶಿಸಿದೆ ಎನ್ನಲಾಗಿದೆ.
ಯೆಸ್, ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು ಮಾಲಿನ್ಯವನ್ನು ಕಡಿಮೆ ಮಾಡಲು, ದೆಹಲಿ ಸರ್ಕಾರವು ಮುಂದಾಗಿದ್ದು ಈ ನಡುವೆ ಸರ್ಕಾರಿ ಕಚೇರಿ ನೌಕರರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ಆದೇಶಿದಿದೆ.
ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಪರಿಸರ ಸಚಿವ ಗೋಪಾಲ್ ರೈ, ಮನೆಯಲ್ಲಿ 50% ಉದ್ಯೋಗಿಗಳು ಮನೆಯಿಂದ ಕೆಲಸ ಮಾಡುತ್ತಾರೆ. ಇದರ ಅನುಷ್ಠಾನಕ್ಕಾಗಿ, ಇಂದು ಮಧ್ಯಾಹ್ನ 1 ಗಂಟೆಗೆ ಸಚಿವಾಲಯದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು” ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
Key words: Delhi Government, orders ,50% employees, work from home