ಬೆಂಗಳೂರು, ಮಾರ್ಚ್ 06, 2022 (www.justkannada.in): ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಳ್ಳಲಾಗಿದೆ. ಕಳಸಾ ಬಂಡೂರಿ ಯೋಜನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.
ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾದ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಅಡ್ಡಿಯಾಗದು. ನಮ್ಮ ಡಿಪಿಆರ್ ಮಾದರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ವಿವಾದ 1996 ರಿಂದ ಇದೆ. 2012ರಲ್ಲಿ ನಾನೇ ಡಿಪಿಆರ್ ಬದಲು ಮಾಡಲು ಕ್ರಮ ಕೈಗೊಂಡಿದ್ದೆ. ಯೋಜನೆಗೆ ಕೇಂದ್ರದ ಅನುಮೋದನೆ ಅವಶ್ಯವಾಗಿದೆ ಎಂದಿದ್ದಾರೆ ಬಸವರಾಜ ಬೊಮ್ಮಾಯಿ