ನವದೆಹಲಿ,ಜನವರಿ,26,2021(www.justkannada.in): ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆ ಹಿಂಡೆಯುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ತೀವ್ರ ಸ್ವರೂಪ ಪಡೆದಿದ್ದು ಟ್ರ್ಯಾಕ್ಟರ್ ರ್ಯಾಲಿ ನಡೆಸುವ ಮೂಲಕ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಟ್ರ್ಯಾಕ್ಟರ್ ರ್ಯಾಲಿಗೆ ವಿವಿಧ ರಾಜ್ಯಗಳಿಂದ ಸಾವಿರಾರು ರೈತರು ಆಗಮಿಸಿದ್ದಾರೆ. ಈ ಮಧ್ಯೆ ದೆಹಲಿಯ ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಆಗಮಿಸುತ್ತಿದ್ಧ ರೈತರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ.

ರೈತರು ಬ್ಯಾರಿಕೇಡ್ ಕಿತ್ತೆಸೆದು ಪೊಲೀಸರ ಕೋಟೆ ಬೇಧಿಸಿ ಮುನ್ನುಗ್ಗಲು ಯತ್ನಿಸಿದ್ದು ಈ ನಡುವೆ ಸಿಂಘ ಗಡಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಷರದಾಮ ಬಳಿ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಲಾಗಿದೆ.
Key words: Delhi- trafficking experiment – farmers- going – tractor rally.