ಬೆಂಗಳೂರು,ಫೆ,13,2020(www.justkannada.in): ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ್ ಬಂದ್ ಮಾಡಲಾಗಿದೆ. ಈ ನಡುವೆ ಇನ್ನೊಂದೆಡೆ ಕನ್ನಡಪರ ಸಂಘಟನೆಗಳು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮೀಸಲಾತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.85 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿ ಹೊರ ಬಂದಿದ್ದಾರೆ.
ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಬಂದ್ ವಾಪಸ್ ಪಡೆಯರಿ. ಈ ಬಗ್ಗೆ ಮಾತನಾಡು ಸಿದ್ಧ ನಮ್ಮ ಮನೆಗೆ ಬನ್ನಿ ಎಂದು ಹೇಳಿದ್ದರು. ಈ ಹಿನ್ನೆಲೆ ಇಂದು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ.
Key words: Demanding- reservation – employment –Kannadigas-Kannada activists – Appeall- CM BS yeddyurappa