ನೆಲಮಂಗಲ, ಜುಲೈ 12, 2024 (www.justkannada.in): ಕಾಂಗ್ರೆಸ್ ನವರದ್ದು ಗೂಂಡಾ ಸರ್ಕಾರ. ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ನಮ್ಮ ಮೇಲೆ ಪೊಲೀಸರಿಂದ ದೌರ್ಜನ್ಯ ಮಾಡಿಸುವ ಕೆಲಸ ಮಾಡುತ್ತಿದೆ. ಪ್ರತಿಭಟನೆಗೆ ಹೆದರಿ ಕಾಂಗ್ರೆಸ್ ಸರ್ಕಾರ ನಮ್ಮನ್ನ ಬಂಧಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ಕಾರ್ಯಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೇ ಬರೀ ಲೂಟಿ ಮಾಡದೇ ಕೆಲಸ ಆಗಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಬಿಜೆಪಿ ಮುಖಂಡರನ್ನು ಮನೆ ಬಳಿಯೇ ಬಂಧಿಸುವ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎಮರ್ಜೆನ್ಸಿ ಜಾರಿಗೊಳಿಸಿದೆ ಎನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಪ್ರತಿಭಟನೆಗೆ ರಾಜ್ಯ ಸರ್ಕಾರ ಗಢಗಢ ನಡುಗಿದೆ. ಪ್ರತಿಭಟನೆಗೆ ಹೆದರಿ ನಮ್ಮನ್ನ ಬಂಧಿಸಿದೆ. ಬಿಜೆಪಿ ಹೋರಾಟದ ಫಲವಾಗಿ ಒಂದು ವಿಕೆಟ್ ಬಿದ್ದಿದೆ. ಏನೂ ಭ್ರಷ್ಟಾಚಾರ ನಡದೇ ಇಲ್ಲ ಎಂಬ ರೀತಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಕೊಡುತ್ತಿದ್ದಾರೆ. ಇವತ್ತು ನಾಗೇಂದ್ರರನ್ನು ಬಂಧಿಸಿದ್ದಾರೆ. ಆದರೆ, ರೇವಣ್ಣ ಕೇಸ್ ನಲ್ಲಿ ಮೂರು ದಿನಕ್ಕೊಮ್ಮೆ ಬಂಧಿಸುತ್ತಾರೆ. ಆದರೆ, 40 ದಿನವಾದರೂ ಹಗರಣ ಪ್ರಕರಣದಲ್ಲಿ ಬಂಧನ ಮಾಡುತ್ತಿಲ್ಲ ಎಂದರೆ ಏನು ಅರ್ಥ ಎಂದು ಅಶೋಕ್ ಹರಿಹಾಯ್ದರು.
Key words: democracy, Congress, arrested, protest, R.Ashok