ಬೆಂಗಳೂರು,ಫೆಬ್ರವರಿ,16,2023(www.justkannada.in): ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ತಪ್ಪದೇ ಹಾಜರಿರುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿದೆ.
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಹಾಜರಾತಿಯಿಂದ ವಿನಾಯಿತಿ ಕೋರಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.
ಆದರೆ ಹೆಚ್.ಡಿ ಕುಮಾರಸ್ವಾಮಿ ಪದೇ ಪದೇ ವಿಚಾರಣೆಗೆ ಗೈರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುಂದಿನ ವಿಚಾರಣೆ ವೇಳೆ ತಪ್ಪದೇ ಹೆಚ್.ಡಿ ಕುಮಾರಸ್ವಾಮಿ ಹಾಜರಿಗೆ ಸೂಚನೆ ನೀಡಿತು. ಈ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರ ಹಾಜರಿ ಇರಿಸುವುದಾಗಿ ವಕೀಲರ ಭರವಸೆ ನೀಡಿದರು. ಕೋರ್ಟ್ ವಿಚಾರಣೆಯನ್ನ ಮಾರ್ಚ್ 21ಕ್ಕೆ ಮುಂದೂಡಿತು.
ಚಾಮರಾಜನಗರದ ಎಂಎಸ್ ಮಹದೇವಸ್ವಾಮಿ ಎಂಬುವವರು ದೂರು ದಾಖಲಿಸಿದ್ದರು. ಬಿ ರಿಪೋರ್ಟ್ ತಿರಸ್ಕರಿಸಿ ನ್ಯಾಯಾಲಯ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.
Key words: Denotification case- Court – former CM -HDK – present – next hearing.