ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್: ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಬೆನ್ನಲ್ಲೆ ಜಾಮೀನು.

ಅಹಮದಾಬಾದ್, ಮಾರ್ಚ್,23,2023(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ  ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು ನೀಡಿದೆ.

2019 ರಲ್ಲಿ ಕರ್ನಾಟಕದಲ್ಲಿ  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪ ಮಾಡಲಾಗಿತ್ತು. ಈ ಬಗ್ಗೆ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.  ಗುಜರಾತ್ ಸೂರತ್ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಸೂರತ್ ಕೋರ್ಟ್ ರಾಹುಲ್ ಗಾಂಧಿ ದೋಷಿ ಎಂದು  ತೀರ್ಪು ಪ್ರಕಟಿಸಿ 2 ವರ್ಷಗಳ ಕಾಳ ಜೈಲು ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೆ ರಾಹುಲ್ ಗಾಂಧಿಗೆ 15 ಸಾವಿರ ರೂ. ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Derogatory -statement -case -against -PM Modi- Rahul Gandhi – 2 years -jail.