ಬೆಂಗಳೂರು,ಡಿ,16,2019(www.justkannada.in): ಮಂತ್ರಿಯಾಗಲೂ ನನಗೂ ಆಸೆ ಇದೆ . ನಮ್ಮ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗೊತ್ತಿದೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಾನು ಬದ್ಧ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾತನಾಡಿದ ಎಂಟಿಬಿ ನಾಗರಾಜ್, ಉಪಚುನಾವಣೆಯಲ್ಲಿ ಸೋಲನುಭವಿಸಿದ ನಮಗೆ ಮಂತ್ರಿಗಿರಿ ಬಗ್ಗೆ ಯಾವುದೇ ಭರವಸೆ ನೀಡಿಲ್ಲ. ಮಂತ್ರಿಯಾಗುವ ಆಸೆ ನಮಗೂ ಇದೆ. ನಮ್ಮ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗೊತ್ತಿದೆ. ಅವರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಇದೇ ವೇಳೆ, ಸಂಸದ ಬಚ್ಚೇಗೌಡ ಹಾಗೂ ಪುತ್ರ ಶರತ್ ಬಚ್ಚೇಗೌಡ ವಿರುದ್ಧ ಕಿಡಿಕಾರಿದ ಎಂಟಿಬಿ ನಾಗರಾಜ್, ನನ್ನ ಸೋಲಿಗೆ ಬಚ್ಚೇಗೌಡ, ಶರತ್ ಬಚ್ಚೇಗೌಡ ಕಾರಣ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕಿದೆ ಅಪ್ಪಮಗ ಇಬ್ಬರು ಪ್ರಾರಂಭದಲ್ಲಿ ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಳಿಸಲು ಒಪ್ಪಿಗೆ ಕೊಟ್ಟಿದ್ದರು. ಆದರೆ ಆಮೇಲೆ ಉಲ್ಟಾ ಹೊಡೆದ್ರು. ಹೀಗಾಗಿಯೇ ತಾವು ಸೋಲನುಭವಿಸಬೇಕಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
Key words: desire – become – minister-former Minister- MTB Nagaraj-cm bs yeddyurappa