ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನಾವೀಸ್ ಆಯ್ಕೆ: ನಾಳೆ ಪ್ರಮಾಣ ವಚನ

 

ಮುಂಬೈ,ಡಿಸೆಂಬರ್,4,2024 (www.justkannada.in):  ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನಾವೀಸ್‌ ಅವರು ಆಯ್ಕೆಯಾಗಿದ್ದಾರೆ.

ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನಾವೀಸ್‌ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಕೇಂದ್ರ ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿಜಯ್ ರೂಪಾನಿ ಅವರು ಪಾಲ್ಗೊಂಡಿದ್ದರು.

ಇಂದು ರಾಜ್ಯಪಾಲರ ಭೇಟಿಯಾಗಲಿರುವ ಮಯಾಯುತಿ ನಿಯೋಗ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ.   ನಾಳೆ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ದೇವೇಂದ್ರ ಫಡ್ನಾವೀಸ್ ಅವರು  ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ ಶಿಂದೆ ಮತ್ತು ಅಜಿತ್‌ ಪವಾರ್‌ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

Key words: Devendra Fadnavis, elected , new CM of Maharashtra