ಬೆಂಗಳೂರು, ಮೇ 17, 2019 : (www.justkannada.in news) : ರಾಜ್ಯದ ಧಾರ್ಮಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತಾಧಿಗಳು ಭೇಟಿ ನೀಡುವ ಉದ್ದೇಶವಿದ್ದರೆ ಅದನ್ನು ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡಿ ಎಂದು ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳು ಹೇಳಿರುವುದಿಷ್ಟು….
ಬೇಸಿಗೆ ಬಿಸಿಲಿನಿಂದ ದೇಶಾದ್ಯಂತ ನೀರಿನ ಅಭಾವ ಉದ್ಭವಿಸಿದೆ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜನತೆ ನೀರಿಗಾಗಿ ಪರಿತಪಿಸುತ್ತಿದ್ದಾರೆ. ರೇಶನ್ ಮೂಲಕ ಕುಡಿಯುವ ನೀರನ್ನು ಜಿಲ್ಲಾಡಳಿತ ನೀಡುತ್ತಿರುವುದೇ ಇದಕ್ಕೆ ಸಾಕ್ಷಿ. ಶ್ರೀ ಕ್ಷೇತ್ರದಲ್ಲೂ ನೀರಿನ ಸಮಸ್ಯೆ ಉಲ್ಭಣಿಸಿದೆ. ಜತೆಗೆ ನೇತ್ರಾವತಿ ನದಿಯಲ್ಲೂ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗುತ್ತಿದೆ. ಆದ್ದರಿಂದ ಭಕ್ತಾಧಿಗಳು ಹಾಗೂ ಪ್ರವಾಸಿಗರು ಕೆಲ ದಿನಗಳ ಮಟ್ಟಿಗೆ ತಮ್ಮ ಪ್ರವಾಸವನ್ನು ಮುಂದೂಡಿ ಸಹಕರಿಸಿ ಎಂದು ವಿನಂತಿಸಿದ್ದಾರೆ.
Devotees do not come to Dharmasthala for a few days: veerendra heggade appeal
appeal by pontiff to postpone visit to pilgrimage to dharmastal …for few days
#dharmasthala #veerendrahegde #waterproblem