ಬೆಂಗಳೂರು, ಜುಲೈ 13, 2020 (www.justkannada.in): ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರ ಕೈಗೊಂಡಿದೆ.
ಧಾರವಾಡ ಜಿಲ್ಲೆಯಲ್ಲಿ 10 ದಿನ ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರ ಕೈಗೊಂಡಿದ್ದರೇ, ದಕ್ಷಿಣ ಕನ್ನಡ ಜಿಲ್ಲಾಡಳಿತ ಒಂದು ವಾರ ಸಂಪೂರ್ಣ ಲಾಕ್ ಡೌನ್ ನಿರ್ಧಾರ ಕೈಗೊಂಡಿದೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಜಗದೀಶ್ ಶೆಟ್ಟರ್, ಧಾರವಾಡ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬುಧವಾರದಿಂದ ಹತ್ತು ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ. ಜುಲೈ 15ರಿಂದ ಜುಲೈ 24ರವರೆಗೆ ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಢಳಿತ ಕೂಡ ಕೊರೋನಾ ನಿಯಂತ್ರಣದ ಮುಂಜಾಗ್ರತಾ ಕ್ರಮವಾಗಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ನಿರ್ಧಾರ ಕೈಗೊಂಡಿದೆ. ಗುರುವಾರದಿಂದ ಒಂದು ವಾರ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.