ನವದೆಹಲಿ, ಜುಲೈ 22, 2019 (www.justkannada.in) ಮಹೇಂದ್ರ ಸಿಂಗ್ ಧೋನಿ ವೆಸ್ಟ್ ಇಂಡೀಸ್ ಪ್ರವಾಸದಿಂದ ಹಿಂದೆ ಸರಿದಿದ್ದು, ಮುಂದಿನ ಎರಡು ತಿಂಗಳು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಜೊತೆ ಜಮ್ಮು ಕಾಶ್ಮೀರದಲ್ಲಿ ತರಬೇತಿ ಪಡೆಯಲಿದ್ದಾರೆ.
ಧೋನಿ ಕಾಶ್ಮೀರದಲ್ಲಿ ಸೇನಾ ತರಬೇತಿಗೆ ಹೋಗುತ್ತಿದ್ದಾರೆ. ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವಯ ನಿರ್ವಹಿಸಲು ಇಚ್ಚಿಸಿದ್ದರು. ಅದರಂತೆಯೇ ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಅನ್ನು ಸೇರಿಕೊಂಡು ತರಬೇತಿಯಲ್ಲಿ ಭಾಗವಹಿಸಲು ಅನುಮತಿ ಕೇಳಿದ್ದರು.
ದೋನಿ ಮನವಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪುರಸ್ಕರಿಸಿದ್ದಾರೆ. ಧೋನಿ ಅವರ ತರಬೇತಿಯ ಕೆಲ ಭಾಗ ಜಮ್ಮುಕಾಶ್ಮೀರದಲ್ಲಿ ನಡೆಯಲಿದೆ.