ಬೆಂಗಳೂರು,ಫೆಬ್ರವರಿ,26,2021(www.justkannada.in): ಲ್ಯಾಪ್‌ಟಾಪ್, ಟ್ಯಾಬ್ ಇತ್ಯಾದಿ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದ್ದು ಈ ಬಗ್ಗೆ ಐಟಿ- ಬಿಟಿ, ಎಲೆಕ್ಟ್ರಾನಿಕ್ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಕಂಪನಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.
ಬೆಂಗಳೂರಿನ ಡಿಸಿಎಂ ಅಶ್ವಥ್ ನಾರಾಯಣ್ ಅವರ ಮುಂದೆ ಪ್ರಸ್ತಾವನೆ ಇಟ್ಟ ಡಿಕ್ಸನ್ ಕಂಪನಿಯ ಕಾರ್ಯಕಾರಿ ಅಧ್ಯಕ್ಷ ಸುನಿಲ್ ವಚಾನಿ, ಅಗತ್ಯವಾದ ಜಾಗ ಹಾಗೂ ಇತರೆ ಅಂಶಗಳ ಬಗ್ಗೆ ಬೇಡಿಕೆ ಇಟ್ಟರು. ಕಂಪನಿಯ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿಸಿಎಂ ಅವರು ಜಮೀನು ಕೊಡುವ ಭರವಸೆ ನೀಡಿದರು.
ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣಾ (ಇಎಸ್‌ಡಿಎಂ) ಇಲಾಖೆಯ ವ್ಯಾಪ್ತಿಯಲ್ಲಿ ಈ ಯೋಜನೆ ಕಾರ್ಯಗತವಾಗಲಿದೆ. ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ, ಮಿಂಡೇನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು, ರಾಮನಗರ ಜಿಲ್ಲೆಯ ಹಾರೋಹಳ್ಳಿ; ಇವಿಷ್ಟೂ ಜಾಗಗಳ ಪೈಕಿ ಯಾವುದಾದರೂ ಒಂದು ಸ್ಥಳದಲ್ಲಿ ತಯಾರಿಕಾ ಘಟಕವನ್ನು ಡಿಕ್ಸನ್ ಕಂಪನಿ ಸ್ಥಾಪನೆ ಮಾಡಲು ಜಮೀನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್ ಮಾಹಿತಿ ನೀಡಿದರು.
ಕಂಪನಿಯು 10ರಿಂದ 15 ಎಕರೆಯಷ್ಟು ಭೂಮಿಗೆ ಬೇಡಿಕೆ ಇಟ್ಟಿದೆ. ಇಎಸ್‌ಡಿಎಂ ನೀತಿಯ ಪ್ರಕಾರ ಬೆಂಗಳೂರಿನ ಹೊರಗೆ ಮೇಲೆ ತಿಳಿಸಿದ ಯಾವುದೇ ಜಾಗದಲ್ಲಿ ಕಂಪನಿ ತನ್ನ ಘಟಕವನ್ನು ಸ್ಥಾಪನೆ ಮಾಡಿದರೆ ಸರಕಾರದಿಂದ ಸಿಗಲಿರುವ ಎಲ್ಲ ಸಬ್ಸಿಡಿ, ಪ್ರಯೋಜನಗಳು ದೊರೆಯಲಿವೆ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆಯೂ ಕಂಪನಿಗೆ ಮನವರಿಕೆ ಮಾಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.
ಸುಮಾರು 30 ಸಾವಿರ ಕೋಟಿಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಡಿಕ್ಸನ್ ಕಂಪನಿಯು; ಲ್ಯಾಪ್‌ಟಾಪ್, ಟ್ಯಾಬ್, ಡೆಸ್ಟಾಪ್, ಸಿಎಫ್‌ಎಲ್ ಬಲ್ಬ್‌ಗಳು, ಎಲ್‌ಇಡಿ ಟೀವಿಗಳು, ಸಿಸಿಟಿವಿ, ವಾಷಿಂಗ್ ಮಷಿನ್ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅತುಲ್ ಲಾಲ್, ಐಟಿ- ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ, ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಸರಕಾರದ ಹಿರಿಯ ಅಧಿಕಾರಿಗಳು ಇದ್ದರು.
ENGLISH SUMMARY…
Dixon Company proposes investment in Karnataka: DCM Ashwathnarayan holds discussion
Bengaluru, Feb. 25, 2021 (www.justkannada.in): Noida-based Dixon Company which is one of the leading laptops, tabs, and other electronic goods production company has proposed to invest in Karnataka. Deputy Chief Minister and IT-BT, Electronics Minister, Govt. of Karnataka Dr. C.N. Ashwathnarayan held discussions regarding the investment with the company officials.
Mr. Sunil Vachani, Executive President, Dixon submitted a proposal of investment and has demanded space and other requirements to set up the production unit in Karnataka. The DCM has responded positively and has assured to provide the land required.
The Company has demanded 10-15 acres of land. If the company sets up its production unit anywhere in the surroundings of Bengaluru city it will get all the government benefits including subsidy.
Dr. Ashwathnarayan also has informed that the company would be shown the land available at Mastenahalli, Mindenahalli in Kolar District, Haraluru in Bengaluru Rural District, and Harohalli in Ramanagara District. “We have also explained them about giving preference of jobs to locals,” he added.
Mr. Atul Lal, Managing Director, Dixon, Ramana Reddy, Additional Chief Secretary, IT-BT Department, P. Pradeep, Secretary to the Deputy Chief Minister Dr. C.N. Ashwathanarayan, Meena Nagaraj, Director, IT Department and Gunjan Krishna, Commissioner, Industrial Development and other senior officers were present on the occasion.
Keywords: DCM Dr. C.N. Ashwathnarayan/ Dixon/ production unit in Karnataka
Key words: Dickson Company-investment- proposal – state-DCM- Ashwath Narayan.