ಕುಂಭಮೇಳಕ್ಕೆ ತೆರಳುವಾಗ ಅಪಘಾತ: ರಾಜ್ಯದ ಇಬ್ಬರು ಸಾವು

ಪೋರ್ ಬಂದರ್, ಫೆಬ್ರವರಿ,25,2025 (www.justkannada.in):  ಕುಂಭಮೇಳಕ್ಕೆ ತೆರಳುವ ವೇಳೆ ಅಪಘಾತದಕ್ಕೀಡಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮತ್ತಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಇದೀಗ ಗುಜರಾತ್ ನ ಪೋರ್ ಬಂದರ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ರಾಜ್ಯದ ವಿಜಯಪುರ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗೆ (40) ಮೃತಪಟ್ಟವರು ಎನ್ನಲಾಗಿದೆ.

ಮೃತಪಟ್ಟವರು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನವರಾಗಿದ್ದು   ನಿಂತಿದ್ದ ಟಿಪ್ಪರ್ ಗೆ ವಾಹನವೊಂದು ವೇಗವಾಗಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ನಿನ್ನೆಯಷ್ಟೆ  ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಯಾಗ್ರಾಜ್ ನ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 6 ಜನರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು.

Key words: state, Two people, die, accident, Kumbh Mela