ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ : ಡಿ.ಕೆ ಶಿವಕುಮಾರ್

ಬೆಂಗಳೂರು,ಅಕ್ಟೋಬರ್,29,2020(www.justkannada.in) : ‘ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ. ಕುಸುಮಾ ತಮ್ಮ ಜೀವನ ನೆನೆಸಿಕೊಂಡು, ತಮಗಾದ ನಷ್ಟ, ನೋವುಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ, ಮುನಿರತ್ನ ಅವರು ತಮಗೆ ಇಂತಾ ಸ್ಥಿತಿ ತಂದುಕೊಂಡನಲ್ಲಾ ಅಂತಾ ಕಣ್ಣೀರು ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.jk-logo-justkannada-logo

ರಾಜರಾಜೇಶ್ವರಿ ನಗರದಲ್ಲಿ ಅನ್ಯ ಪಕ್ಷಗಳ ಅನೇಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಇದೇ ಸಂದರ್ಭದಲ್ಲಿ ಶಿವಕುಮಾರ್ ಅವರು ಮಾಧ್ಯಮದವರ ಜತೆ ಮಾತನಾಡಿದರು.

ಮುನಿರತ್ನ ಉತ್ತಮ ಆ್ಯಕ್ಟರ್, ಪ್ರೋಡ್ಯುಸರ್ ಅಲ್ವಾ?

ಕಾಂಗ್ರೆಸ್ ನನ್ನ ಉಸಿರು, ನನ್ನ ರಕ್ತ ಅಂತಾ ಹೇಳಿದ್ದ ಮುನಿರತ್ನ ಈಗ ಬಿಜೆಪಿಯಲ್ಲಿ ಮತ ಕೇಳುತ್ತಿದ್ದೇನಲ್ಲಾ ಅಂತಾ ನೆನೆಸಿಕೊಂಡು ಅತ್ತಿದ್ದಾರೆ. ಮುನಿರತ್ನ ಉತ್ತಮ ಆ್ಯಕ್ಟರ್, ಪ್ರೋಡ್ಯುಸರ್ ಅಲ್ವಾ? ಜನರು ಕೇಳುವ ಪ್ರಶ್ನೆಗೆ ಉತ್ತರ ಕೊಡಲಾಗದೆ ಕಣ್ಣೀರು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧ ಭಾಷಣ ಮಾಡಿದ್ದರು, ಈಗ ಅವರ ಪಕ್ಷ ಸೇರಿಕೊಂಡು ಚುನಾವಣೆ ಎದುರಿಸಬೇಕಾಗಿದೆಯಲ್ಲ ಅಂತಾ ಕಣ್ಣೀರಾಕಿರಬಹುದು ಎಂದು ವ್ಯಂಗ್ಯಮಾಡಿದರು.

ಪರಿಸ್ಥಿತಿಗೆ ತಕ್ಕಂತೆ ಅಭಿನಯಿಸುವ ಉತ್ತಮ ನಟ

ಹಿಂದೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತಿದ್ದರು. ಈಗ ಡಿ.ಕೆ ಶಿವಕುಮಾರ್ ಅವರ ಹಿಂದೆ ಯಾರೂ ಇಲ್ಲ ಅಂತಾ ಹೇಳಿದ್ದಾರೆ. ಒಟ್ಟಾರೆ ಅವರು ಪರಿಸ್ಥಿತಿಗೆ ತಕ್ಕಂತೆ ಅಭಿನಯಿಸುವ ಉತ್ತಮ ನಟ. ಇದನ್ನೆಲ್ಲಾ ನೋಡುತ್ತಿರುವ ಜನ ದಡ್ಡರಲ್ಲ. ನಾನು ಕಣ್ಣೀರು ಹಾಕಿದರೂ ಬೇರೆಯವರು ಹಾಕಿದರೂ ಏನು ಆಗುವುದಿಲ್ಲ. ಈಗ ಕಣ್ಣೀರು ಹಾಕಿ ಪ್ರಯೋಜನ ಇಲ್ಲ ಎಂದರು.

ಉಪಚುನಾವಣೆ ನಂತರ ಧರ್ಮದ ವಿಚಾರ

difference-between-Kusuma's-tears-Munirat's-tears-D.K.Sivakumar

ಇಂದು ದೇವಾಲಯಕ್ಕೆ ಹೋಗಿ ದೇವರ ಆಶೀರ್ವಾದ ಪಡೆದೆ ಹಾಗೂ ಚರ್ಚ್ ಗೆ ಭೇಟಿ ಕೊಟ್ಟು ಪಾದ್ರಿಗಳನ್ನು ಭೇಟಿ ಮಾಡಿದೆ. ನೀವು ಆಶೀರ್ವಾದ ಮಾಡಿದರೂ ತೆಗೆದುಕೊಳ್ಳುತ್ತೇನೆ. ಕಪಾಲಿ ಬೆಟ್ಟದ ವಿಚಾರವಾಗಿ ಬಿಜೆಪಿ ನಾಯಕರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ‘3ರಂದು ನಡೆಯುವ ಚುನಾವಣೆ ಆಗಲಿ ಆಮೇಲೆ ಧರ್ಮದ ವಿಚಾರವಾಗಿ ಮಾತನಾಡೋಣ’ ಎಂದರು.

ಈ ಹಿಂದೆ ಆಡಿದ ಮಾತಿಗೆ ಬದ್ಧರಾ?

‘ಮುನಿರತ್ನ ಅವರ ವಿರುದ್ಧ ಮೋದಿ ಅವರು, ಸದಾನಂದಗೌಡ, ಯಡಿಯೂರಪ್ಪನವರು ಆಡಿದ ಮಾತಿಗೆ ಈಗಲೂ ಬದ್ಧರಾಗಿದ್ದಾರಾ ಇಲ್ಲವಾ? ಎಂಬುದನ್ನು ಕೇಳಿ.’ ಇನ್ನು ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಜಮೀರ್ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು ಎಂದು ತಿಳಿಸಿದರು.

key words : difference-between-Kusuma’s-tears-Munirat’s-tears-D.K.Sivakumar