HMPV ಅಪಾಯಕಾರಿ ಅಲ್ಲ, ಆತಂಕ ಬೇಡ: ಮುಂಜಾಗ್ರತೆ ಅಗತ್ಯ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜನವರಿ,6,2025 (www.justkannada.in): ಹೆಚ್‌ಎಂಪಿವಿ ಅಪಾಯಕಾರಿ ಅಲ್ಲ, ಆತಂಕ ಬೇಡ. ಆದರೆ  ಮುಂಜಾಗ್ರತೆ ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್‌ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಭಾರತದಲ್ಲಿ ಹೆಚ್​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್​​ಎಂಪಿ ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಹೇಳಿದರು.

ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್​​ಎಂಪಿ ವೈರಸ್​ ರೀತಿ ನೂರಾರು ವೈರಸ್​ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್‌ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. ಈ ವೈರಸ್ ಬಗ್ಗೆ ಯಾರೂ ಭಯ ಪಡಬೇಡಿ. ವೈರಸ್ ಬಗ್ಗೆ ಜನರಲ್ಲಿ ಆತಂಕ ಸೃಷ್ಠಿಯಾಗಿದೆ. ವೈರಸ್ ಬಗ್ಗೆ ಶಾಲಾ ಮಕ್ಕಳು ಭಯಪಡಬೇಕಿಲ್ಲ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ.  ಕೇಂದ್ರ ಸರ್ಕಾರದಿಂದ ಯಾವುದೇ ಸೂಚನ ಬಂದಿಲ್ಲ  ಲಾಕ್ ಡೌನ್ ಮಾಸ್ಕ್ ಯಾವುದು ಇಲ್ಲ ಭಯಪಡಬೇಡಿ ಎಂದರು.

ಕರ್ನಾಟಕದಲ್ಲಿ 2 ಲಕ್ಷ 36 ಸಾವಿರ ಐಎಲ್‌ಐ ಕೇಸ್​ಗಳಿವೆ. ಐಎಲ್‌ಐ ಕೇಸ್ ​ನಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಪುದುಚೆರಿ, ಗುಜರಾತ್​ನಲ್ಲಿ ಹೆಚ್‌ಎಂಪಿ ವೈರಸ್ ಪ್ರಕರಣವಿದೆ. ಕೇಂದ್ರ ಸರ್ಕಾರದ ಮಾಹಿತಿ ಅನ್ವಯ ಐಎಲ್​​ಐ ಕೇಸ್ ಹೆಚ್ಚಾಗಿಲ್ಲ. ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್‌ಎಂಪಿವಿ ಪ್ರಕರಣವಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.

Key words: HMPV, not, dangerous, Minister, Dinesh Gundu Rao