ನಾಳೆ ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದು

ಬೆಂಗಳೂರು,ಜನವರಿ,7,2025 (www.justkannada.in):  ನಾಳೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳಿನ ಡಿನ್ನರ್ ಮೀಟಿಂಗ್ ರದ್ದುಪಡಿಸಲಾಗಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಮುಂದಿನ ಸಭೆಯ ದಿನಾಂಕವನ್ನು ಶೀಘ್ರವೇ ತಿಳಿಸಲಾಗುತ್ತದೆ ಎಂದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ ಬಳಿಕ ಬೆಂಗಳೂರಿನ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾರ್ಟಿ ನಡೆದಿತ್ತು. ಈ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಮೀಟಿಂಗ್ ಏರ್ಪಾಟು ಮಾಡಲಾಗಿತ್ತು. ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಡಿನ್ನರ್ ಮೀಟಿಂಟ್ ರದ್ದು ಮಾಡಲಾಗಿದೆ.

ನಾಳೆ ಸಂಜೆ ಎಸ್.ಸಿ., ಎಸ್.ಟಿ ಸಮಾವೇಶಕ್ಕೆ ಪೂರ್ವಭಾವಿ ಸಭೆ ನಡೆಸಲಾಗುವುದು. ನಂತರ ಔತಣಕೂಟ ಏರ್ಪಡಿಸಲಾಗಿದೆ ಎಂದು  ಪರಮೇಶ್ವರ್ ತಿಳಿಸಿದ್ದರು.

Key words: Dinner meeting, canceled, Parameshwar