ಮೈಸೂರು, ಫೆ.೧೩,೨೦೨೫: ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ರಾಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಮಂಟೆಲಿಂಗು ಅವರನ್ನು ನೇಮಕ ಮಾಡಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರ ಹುದ್ದೆ ನೇಮಕಕ್ಕೆ ಸಂಬಂಧಿಸಿದಂತೆ ಸಂದರ್ಶನ ನಡೆದು ಅನೇಕರು ಪೈಪೋಟಿಯಲ್ಲಿದ್ದರು. ಅಂತಿಮವಾಗಿ ಇದೀಗ ಪ್ರೊ.ಮಂಟೆಲಿಂಗು ಅವರನ್ನು ನೇಮಕ ಮಾಡಲಾಗಿದೆ.
ಕಾವೇರಿದ ಚರ್ಚೆ:
ಯುಜಿಸಿ ನಿಯಮಾವಳಿ ಉಲ್ಲಂಘಿಸಿ ಬೋದಕ ಹುದ್ದೆಗಳಿಗೆ ಬಡ್ತಿ ನೀಡಿರುವ ಕುರಿತು ಗುರುವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು. ಜತೆಗೆ ಬಡ್ತಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಲಾಯಿತು.
ವಿವಿಯ ಸಹಾಯಕ ಪ್ರಾಧ್ಯಾಪಕರು, ಅಸೋಸಿಯೇಟ್ ಪ್ರಾಧ್ಯಾಪಕರು,ಸೀನಿಯರ್ ಪ್ರಾಧ್ಯಾಪಕರಿಗೆ ಬಡ್ತಿ ನೀಡುವ ಕುರಿತಂತೆ ಯುಜಿಸಿ ನಿಯಮಾವಳಿ ಉಲ್ಲಂಘಿಸಲಾಗಿದೆ. ಸರ್ಕಾರದ ನಿರ್ದೇಶನವಿದ್ದರೂ ಹಿಂದಿನ ಕುಲಪತಿಗಳ ಅವಧಿಯಲ್ಲಿ ಬಡ್ತಿ ನೀಡಲಾಗಿದೆ ಎಂದು ಸದಸ್ಯರೊಬ್ಬರು ಸಭೆಯ ಗಮನಕ್ಕೆ ತಂದರು. ಯುಜಿಸಿ ನಿಯಮಾವಳಿ ಉಲ್ಲಂಘಿಸಿದ್ದರಿಂದ ಅಂತಹವರನ್ನು ಹುದ್ದೆಯಿಂದ ವಾಪಸ್ ಪಡೆಯಬೇಕು. ಈ ಬಗ್ಗೆ ಕಾನೂನು ಕ್ರಮಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೇರಿದಂತೆ ೮೦ಕ್ಕೂ ಹೆಚ್ಚು ಜನರು ಎಚ್‌ಆರ್‌ಎ ಪಡೆಯುತ್ತಿದ್ದರೂ ವಸತಿಗೃಹಗಳನ್ನು ಪಡೆದುಕೊಂಡಿದ್ದಾರೆ. ನಿಯಮಾನುಸಾರ ವಸತಿಗೃಹ ಪಡೆಯಬೇಕಾದರೆ ಎಚ್‌ಆರ್ ಪಡೆಯುವಂತಿಲ್ಲ. ಇಲ್ಲಿ ತಪ್ಪು ಮಾಹಿತಿ ಕೊಡಲಾಗಿದೆ. ಹಾಗಾಗಿ,ಈ ಬಗ್ಗೆ ಅಗತ್ಯ ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ದಂಡ ವಿಧಿಸುವ ಜತೆಗೆ ಕಾನೂನು ಕ್ರಮಜರುಗಿಸಬೇಕು ಎಂದು ಸದಸ್ಯರು ಕುಲಪತಿಗಳನ್ನು ಒತ್ತಾಯಿಸಿದರು.
KEY WORDS: UNIVERSITY OF MYSORE, PROF. MANTELINGU, DIRECTOR OF CDC
SUMMARY:
UNIVERSITY OF MYSORE: PROF. MANTELINGU APPOINTED DIRECTOR OF CDC