ಜಮೀರ್ ಅಹ್ಮದ್ ಮೇಲೆ ಶಿಸ್ತು ಕ್ರಮ‌? ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರೋಕ್ಷ ಹೇಳಿಕೆ

ಮೈಸೂರು,ನವೆಂಬರ್,18,2024 (www.justkannada.in): ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರೋಕ್ಷ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ಜಮೀರ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಖುದ್ದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಕೆ.ಪಿ.ಸಿ.ಸಿ.ಅಧ್ಯಕ್ಷರು ಬೇಕಾದರೆ ಪಕ್ಷದ ಶಿಸ್ತು ಪಾಲನ ಸಮಿತಿಗೆ ವರದಿ ಕೊಟ್ಟರೆ ಶಿಸ್ತುಪಾಲನಾ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು. ನಾನು ಈ ಹಿಂದೆ ಎಐಸಿಸಿ ಶಿಸ್ತು ಪಾಲನಾ ಸಮಿತಿ ಸದಸ್ಯನಾಗಿದ್ದೆ. ಆಗ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ಕೊಡುವ ನಾಯಕರನ್ನ ಅವರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಕೊಟ್ಟು ಕರೆಸುತ್ತಿದ್ದೇವು. ಅಗತ್ಯವಿದ್ದರೆ ಸಸ್ಪೆಂಡ್ ಕೂಡ ಮಾಡುತ್ತಿದ್ದೆವು‌. ಈಗಲು ಕೆ‌ಪಿಸಿಸಿ ಅಧ್ಯಕ್ಷರು ಶಿಸ್ತು ಪಾಲನಾ ಸಮಿತಿ ಗಮನಕ್ಕೆ ಈ ವಿಚಾರ ತರಬಹುದು. ಜಮೀರ್ ಹೇಳಿಕೆಯಿಂದ ಸ್ವಲ್ಪ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ ಬೀರುತ್ತಿದೆ ಎಂದ ಪಕ್ಷದ ನಾಯಕರೇ ಹೇಳಿದ್ದಾರೆ ಎಂದರು.

ಡ್ರಗ್ಸ್ ವಿರುದ್ಧ ಸರ್ಕಾರ ಸಮರ

ಬೆಂಗಳೂರಿನಲ್ಲಿ ಚಾಕಲೇಟ್ ರೂಪದಲ್ಲಿ ಡ್ರಗ್ಸ್ ಸಿಗುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್,  ಡ್ರಗ್ಸ್ ವಿರುದ್ಧ ಸರ್ಕಾರ ಸಮರ ಸಾರಿದೆ. ಎಲ್ಲ ಕಡೆ ಕಡಿವಾಣ ಹಾಕಲು ತೀರ್ಮಾನ ಮಾಡಿದ್ದೇವೆ. ಆನೇಕಲ್ ಕಡೆ ಮಾರಾಟ ಆಗ್ತಿದೆ ಎಂಬ ಮಾಹಿತಿ ಸಿಕ್ಕಿತು. ಎಲ್ಲ ಕಡೆ ಕೂಡ ಡ್ರಗ್ಸ್ ತಡೆಯುವಲ್ಲಿ ಪ್ರಯತ್ನ ನಡೀತಿದೆ. ಸ್ಕೂಲ್ ಕಾಲೇಜು ಹುಡುಗರಿಗೆ ಸಪ್ಲೈ ಆಗ್ತಿದೆ ಎಂಬ ಆರೋಪವಿದೆ ಮೆಡಿಕಲ್ ಶಾಪ್ ಗಳಲ್ಲಿ ಸಿಕ್ಕರೆ ಲೈಸನ್ಸ್ ರದ್ದು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ  ಎಂದರು.

ಕೋವಿಡ್ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಕೋಟಿಗಟ್ಟಲೇ ಹಗರಣ ಆಗಿದೆ. ಮೆಡಿಸಿನ್ ಡ್ರಗ್ಸ್ ಖರೀದಿಯಲ್ಲಿ ಅಕ್ರಮ ಆಗಿದೆ. ಇದೆಲ್ಲದರ  ರಿಪೋರ್ಟ್ ಬಂದ ಬಳಿಕ ಕ್ರಮ ಆಗತ್ತೆ ಎಂದು ಪರಮೇಶ್ವರ್ ತಿಳಿಸಿದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಬಿಜೆಪಿ ಜೆಡಿಎಸ್ ಸುಮ್ಮನೆ ಸಿಎಂ ಬದಲಾವಣೆ ಬಗ್ಗೆ ಹೇಳುತ್ತಾರೆ ನಮ್ಮಲ್ಲಿ ಆ ಬಗ್ಗೆ ಚರ್ಚೆ ಆಗಿಲ್ಲ ಎಂದರು.

Key words: Disciplinary, action, Jameer Ahmed, Home Minister, Dr. G. Parameshwar