ಕಲ್ಬುರ್ಗಿ,ಸೆಪ್ಟಂಬರ್,17,2020(www.justkannada.in): ಹಲವು ದಿನಗಳ ಬಳಿಕ ಪ್ರಧಾನಿ ಮೋದಿ ಸೇರಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ.
ಈ ಕುರಿತು ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಮತ್ತು ನಾಳೆ ದೆಹಲಿಯಲ್ಲೇ ಇರಲಿದ್ದೇನೆ. ಪ್ರಧಾನಿ ಮೋದಿ ಭೇಟಿಗೆ ಸಮಯ ನೀಡಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರನ್ನ ಭೇಟಿಯಾಗುತ್ತೇನೆ. ಜತೆಗೆ ಹಲವು ಕೇಂದ್ರ ಸಚಿವರನ್ನೂ ಬೇಟಿಯಾಗಿ ಚರ್ಚಿಸುತ್ತೇನೆ ಎಂದರು.
ದೆಹಲಿ ಭೇಟಿ ವೇಳೆ ಪ್ರಧಾನಿ ಮೋದಿ ಮತ್ತು ಹಲವರ ಜತೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕಲಬುರಗಿಯಿಂದಲೇ ಸಿಎಂ ಬಿಎಸ್ ಯಡಿಯೂರಪ್ಪ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ದೆಹಲಿಯಲ್ಲಿಯೇ ಇರಲಿದ್ದಾರೆ.
Key words: Discuss –cabinet- Extension – Delhi – CM BS Yeddyurappa