ಹುಬ್ಬಳ್ಳಿ,ಅಕ್ಟೋಬರ್, 26,2024 (www.justkannada.in): ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನ ಕೆಲ ನಾಯಕರು ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್ ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದು ಈಗಲಾದರೂ ಅರ್ಥವಾಗಿರಬೇಕು. ಕಾಂಗ್ರೆಸ್ ಪಕ್ಷ ಭ್ರಷ್ಟರ ಪಕ್ಷ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.
ಜೈಲು ಶಿಕ್ಷೆಗೆ ಗುರಿಯಾಗಿರುವ ಸತೀಶ್ ಸೈಲ್ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಸ್ಪೀಕರ್ ವಜಾಗೊಳಿಸಬೇಕು ಎಂದು ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.
Key words: Dismiss, Satish Sail, from, MLA, Union Minister, Prahlad Joshi