ಬೆಂಗಳೂರು,ಜುಲೈ,12,2023(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ದ ಕಾಂಗ್ರೆಸ್ ನಾಯಕರು ಮೌನಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.
Key words: Dismissal – application – Rahul Gandhi- Silent- protest -ongress.