ಮೈಸೂರು,ಫೆಬ್ರವರಿ,11,2021(www.justkannada.in) : ಎಟಿ ಅಂಡ್ ಎಸ್ ಕಾರ್ಖಾನೆಯಲ್ಲಿ ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಎಟಿ ಅಂಡ್ ಎಸ್ ಇಂಡಿಯಾ ಪ್ರೈ.ಲಿಮಿಟೆಡ್ ಎಂಪ್ಲಾಯೀಸ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಜಮಾವಣೆಗೊಂಡ ಪ್ರತಿಭಟನಾಕಾರರು ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳುವಂತೆ ವಿವಿಧ ಘೋಷಣೆಗಳನ್ನು ಕೂಗಿ ಆಗ್ರಹಿಸಿದರು.
ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿರುವ ಎಟಿ ಅಂಡ್ ಎಸ್ ಕಾರ್ಖಾನೆಯ ಆಡಳಿತ ಮಂಡಳಿಯು ಸುಮಾರು 71 ಮಂದಿ ಕಾರ್ಮಿಕರನ್ನು ವಿನಾಕಾರಣ ಆಪಾದನೆ ಮಾಡಿ ಕೋವಿಡ್ ಸಂದರ್ಭದಲ್ಲಿ ಕೆಲಸದಿಂದ ವಜಾ ಗೊಳಿಸಿದ್ದು, ಕೆಲಸಕ್ಕೆ ಮರು ನೇಮಕ ಮಾಡುವ ವಿಚಾರವಾಗಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
12ವರ್ಷಗಳಿಂದಲೂ ಖಾಯಂಗೊಳಿಸದೆ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳಲಾಗುತ್ತಿದೆ. ಖಾಯಂ ಕಾರ್ಮಿಕರಿಗೆ ನೀಡದ ಯಾವುದೇ ಸೌಲಭ್ಯಗಳನ್ನು ನೀಡದೆ ಕಾನೂನು ಬದ್ಧ ಸೌಲಭ್ಯಗಳನ್ನು ನೀಡದೆ ವಂಚಿಸಲಾಗುತ್ತಿದೆ. ಪ್ರಶ್ನಿಸಿದವರನ್ನು ಕೊರೊನಾ ಸಂದರ್ಭದಲ್ಲಿ ವಿನಾಕಾರಣ ನೀಡಿ ಅಮಾನತುಗೊಳಿಸಿ ನಂತರ ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ಆರೋಪಿಸಿದರು.
ಹೊಸದಾಗಿ ಕಾರ್ಮಿಕರನ್ನು ನೇಮಿಸಿ 71ಮಂದಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದಾರೆ. ಇದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕೆಲಸವನ್ನು ಕಳೆದುಕೊಂಡಿರುವ ಕಾರ್ಮಿಕರು ಜೀವನ ನಡೆಸಲು ಪರದಾಡುವಂತಾಗಿದೆ. ಈ ವಿಚಾರವಾಗಿ ಆಡಳಿತ ವರ್ಗವನ್ನು ಕರೆಯಿಸಿ ಕಾರ್ಮಿಕರನ್ನು ಕೆಲಸಕ್ಕೆ ಮರು ನೇಮಕ ಮಾಡಿಕೊಳ್ಳುವಂತೆ ಸೂಚಿಸುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಂಪ್ಲಾಯೀಸ್ ಅಸೋಸಿಯೇಶನ್ನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
key words : Dismissed-Workers-Re-appointment-make-Protests-workers