ಹಾಡಿ ಜನಾಂಗದ ಜನರಿಗೆ ಹೊದಿಕೆ ವಿತರಣೆ:  ಆರೋಗ್ಯದ ಬಗ್ಗೆ ಜಾಗೃತಿ

 

ಮೈಸೂರು,ಡಿಸೆಂಬರ್,2,2024 (www.justkannada.in): ಚಳಿಗಾಲ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ  ಎಚ್ ಡಿ ಕೋಟೆಯಲ್ಲಿನ ಹಾಡಿ ಜನಾಂಗದವರಿಗೆ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಹೊದಿಕೆ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು

ಈ ವೇಳೆ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ಮಾತನಾಡಿ, ಇತ್ತೀಚೆಗೆ ಜಿಲ್ಲೆಯಲ್ಲಿ ವ್ಯಾಪಕವಾದ ಚಳಿ ಪ್ರಾರಂಭವಾಗಿದ್ದು, ವಾತಾವರಣದಲ್ಲಿನ ಉಷ್ಣಾಂಶ ಕಡಿಮೆಯಾಗಿ, ತಂಪಾದ ವಾತಾವರಣ ಕಂಡು ಬರುತ್ತಿದೆ. ಈ ಸಂದರ್ಭದಲ್ಲಿ ದೇಹಕ್ಕೆ ವಿವಿಧ ರೀತಿಯ ತೊಂದರೆಗಳಾಗುತ್ತವೆ. ಶೀತ, ನೆಗಡಿ, ಜ್ವರ, ಅಜೀರ್ಣ, ಅಲರ್ಜಿಯಂತ ಸಮಸ್ಯೆಗಳು ಕಂಡುಬರುತ್ತದೆ. ಚಳಿಯ ತೀವ್ರತೆಯಿಂದ ರಕ್ತ ಸಂಚಾರದಲ್ಲಿ ತೊಂದರೆಯಾಗುವ ಸಂದರ್ಭವಿರುವುದು ಪಾರ್ಶ್ವವಾಯು, ಅಧಿಕ ಮಧುಮೇಹ, ಕಡಿಮೆ ರಕ್ತದೊತ್ತಡ, ಹೃದಯಘಾತಗಳಾಗುವ ಸಂಭವ ಹೆಚ್ಚಾಗಿರುತ್ತದೆ. ಸ್ವಚ್ಚತೆ ಕಾಪಾಡುವುದು, ಜಂಕ್‍ಪುಡ್ ಗಳ ಸೇವನೆ ನಿಲ್ಲಿಸುವುದು. ಯೋಗ, ಧ್ಯಾನ, ವ್ಯಾಯಾಮ, ನಡಿಗೆಯಂತಹ ದೈಹಿಕ ಚಟುವಟಿಕೆಗಳು ಮಾಡಬೇಕು. ವಿಟಮಿನ್-ಡಿ ಹೊಂದಿರುವ ಸೂರ್ಯನ ಬೆಳೆಕು ಪಡೆಯಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಬಹುದಾಗಿದೆ. ಮಧುಮೇಹ ಹೊಂದಿರುವವರು ತಪ್ಪದೇ ಔಷಧಿಗಳನ್ನು ತೆಗೆದುಕೊಳ್ಳಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ನಿಯಮಿತವಾಗಿ ನೀರು ಕುಡಿಯಿರಿ. ಚಳಿಯಲ್ಲಿ ಸುತ್ತಾಟ ಮಾಡುವುದು ಬೇಡ. ಎಲ್ಲಾ ಮುಂಜಾಗ್ರತೆ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಸಲಹೆಗಳನ್ನು ನೀಡಿದರು.

ಈ ವೇಳೆ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ , ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಕ್ರಪಾಣಿ, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಮೋಹನ್ ಕುಮಾರ್ ಗೌಡ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Key words: mysore, Distribution, blankets, Hadi people