ಬೆಂಗಳೂರು,ಆ,14,2020(www.justkannada.in): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದು ನಾನೇ ಎಂದು ಆರೋಪಿ ನವೀನ್ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಈ ಕುರಿತು ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿರುವ ಆರೋಪಿ ನವೀನ್, ವಿವಾದಿತ ಪೋಸ್ಟ್ ಹಾಕಿದ್ದು ನಾನೇ. ಕಮೆಂಟ್ ಮಾಡಿ ಪೋಸ್ಟ್ ಹಾಕಿದ್ದು ನಾನೇ. ರಾತ್ರಿ 7 ಗಂಟೆಗೆ ಹಾಕಿ 8 ಗಂಟೆಗೆ ಡಿಲೀಟ್ ಮಾಡಿದೆ. ಆದರೆ ಹೀಗೆಲ್ಲಾ ಆಗುತ್ತೆ ಎಂದು ಗೊತ್ತಾಗಲಿಲ್ಲ ಎಂದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗನಾಗಿರುವ ಆರೋಪಿ ನವೀನ್ ಸಾಮಾಜಿಕ ಜಾಲತಾಣಗಳಲ್ಲಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಡಿ.ಜೆ ಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಗಲಭೆಗಳು ನಡೆದು ಕಿಡಿಗೇಡಿಗಳು ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದ್ದರು.
ಈ ಮೊದಲು ಮೊಬೈಲ್ ಫೋನ್ ಕಳೆದುಹೋಗಿದೆ ಹಾಗೂ ಫೇಸ್ಬುಕ್ ಹ್ಯಾಕ್ ಆಗಿದೆ ಎಂದು ನವೀನ್ ಹೇಳಿಕೆ ನೀಡಿದ್ದ. ಇದೀಗ ತಪ್ಪೊಪ್ಪಿಕೊಂಡಿರುವ ನವೀನ್, ಫೇಸ್ಬುಕ್ನಲ್ಲಿ ಸ್ಟೆಟಸ್ ಹಾಕಿಕೊಂಡಿದ್ದು ನಾನೇ ಎಂದು ಹೇಳಿದ್ದಾನೆ.
Key words: dj halli- kj hallii- roit- Naveen -accused – controversial post.