ಬೆಂಗಳೂರು,ನವೆಂಬರ್,25,2020(www.justkannada.in): ಕೊರೋನಾಗೆ ತುತ್ತಾಗಿ ಬಹು ಅಂಗಾಂಗ ವೈಫಲ್ಯದಿಂದ ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
‘ಅಹ್ಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹ್ಮದ್ ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ.
ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹ್ಮದ್ ಪಟೇಲ್ ಅವರು. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ ಎಂದು ಅವರು ದುಃಖಿಸಿದ್ದಾರೆ.
ಅಹ್ಮದ್ ಪಟೇಲ್ ಅವರ ಜತೆ ಮೊದಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.
English summary…
KPCC President D.K.Shivakumar condoles demise of senior congress leader Ahmed Patel
Bengaluru, Nov. 25, 2020 (www.justkannada.in): Senior Congress Leader and AICC Treasurer Ahmed Patel, who was suffering from Corona succumbed to multiple organ failure on Wednesday.
He was 71-years-old. He was considered as the troubleshooter of Congress party. He breathed his last at 3.30 am on Wednesday due to multiple organ failure.
KPCC President D.K. Shivakumar has expressed his grief over the death of Ahmed Patel. He has mentioned that Ahmed Patel was a pillar of Congress party who dedicated his entire life for the development of the party.
Keywords: Ahmed Patel – D.K. Shivakumar – KPCC – AICCA
Key words: DK Shivakumar- Condolences.-death -senior Congress leader -Ahmed Patel