ಬೆಂಗಳೂರು,ಮಾರ್ಚ್,24,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.
ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿ ವಿಚಾರಣೆ ಮತ್ತೊಂದು ಪೀಠದಲ್ಲಿರುವ ಹಿನ್ನೆಲೆ, ಆ ಅರ್ಜಿಯ ವಿಚಾರಣೆಯನ್ನೂ ಇದೇ ಪೀಠಕ್ಕೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. ಈ ಹಿಂದೆಯೂ ಕೂಡ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿ ಹೊರಡಿಸಿದ್ದ ಆದೇಶವನ್ನ ಕರ್ನಾಟಕ ಹೈಕೋರ್ಟ್ ಮಾರ್ಚ್ 24ರವರೆಗೂ ವಿಸ್ತರಿಸಿತ್ತು.
ಈ ನಡುವೆ ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ. ನಟಜರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ಮಾಡಿತ್ತು.
ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
Key words: DK Shivakumar -Extension – interim- injunction –CBI- investigation -till -March 31