ಬೆಂಗಳೂರು,ಡಿಸೆಂಬರ್,31,2024 (www.justkannada.in): ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, 2025ನೇ ವರ್ಷವನ್ನು ಸ್ವಾಗತಿಸಲು ಇಡೀ ಪ್ರಪಂಚ ಸಜ್ಜಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶಕ್ಕೆ ಹಾರಿದ್ದಾರೆ. ಹೌದು ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ವಿದೇಶದಲ್ಲಿ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಲಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಳಿಗ್ಗೆಯೇ ಕುಟುಂಬದವರೊಂದಿಗೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು. ಕೆನಡಾ, ಟರ್ಕಿ ಪ್ರವಾಸ ಕೈಗೊಂಡಿದ್ದಾರೆ. ನಾಲ್ಕು ದಿನಗಳ ಕಾಲ ವಿದೇಶದಲ್ಲಿರಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 4 ರಂದು ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
Key words: DCM, DK Shivakumar, family, abroad, New year