ಡಿಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್:  CBI ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು,ಆಗಸ್ಟ್,29,2024 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ವಹಿಸಿ ಅನುಮತಿ ನೀಡಲಾಗಿತ್ತು. ಆದರೇ  ಈಗಿನ ಕಾಂಗ್ರೆಸ್ ಸರ್ಕಾರ ಇದನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ಸಲ್ಲಿಸಿತ್ತು.

ಈ  ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್ ನ್ಯಾಯಪೀಠವು, ಅರ್ಜಿ ವಿಚಾರಣೆಗೆ ಅರ್ಹವಾಗಿಲ್ಲವೆಂದು ತೀರ್ಪು ನೀಡಿದೆ.  ಸುಪ್ರಿಂಕೋರ್ಟ್ ನಲ್ಲಿ ಈ ಅರ್ಜಿ ವಿಚಾರಣೆ ಸೂಕ್ತ. ರಾಜ್ಯ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಮೂಲಕ wisieM ಡಿಕೆ ಶಿವಕುಮಾರ್ ಗೆ  ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Key words: DK Shivakumar, High Court, dismisses, CBI, Writ Petition