ಎಸ್. ಟಿ ನಿಗಮದಲ್ಲಿ ಅಕ್ರಮ ಕೇಸ್: ಸಚಿವ ಬಿ.ನಾಗೇಂದ್ರ ರಾಜೀನಾಮೆ ಸುಳಿವು ನೀಡಿದ ಡಿ.ಕೆ ಶಿವಕುಮಾರ್

ಬೆಂಗಳೂರು,ಜೂನ್,6,2024 (www.justkannada.in): ಎಸ್. ಟಿ ಅಭಿವೃದ್ದಿ ನಿಗಮ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಚಿವ ಬಿ.ರಾಜೀನಾಮೆ ನೀಡುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ಪ್ರಕರಣ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದ್ದು ರಾಜೀನಾಮೆ ನೀಡದಿದ್ದರೇ ಬೃಹತ್ ಹೋರಾಟದ ಎಚ್ಚರಿಕೆ ನೀಡಿದೆ. ಈ ಮಧ್ಯೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸುಳಿವು ನೀಡಿದ ಡಿ.ಕೆ ಶಿವಕುಮಾರ್,  ಇಂದು  ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಬಹುದು. ಸಿಎಂ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷ ಮತ್ತು  ಸರ್ಕಾರದ ಘನತೆ ಉಳಿಸಲು ಸಚಿವ ನಾಗೇಂದ್ರ ರಾಜೀನಾಮೆ ನೀಡಬಹುದು ಎಂದು ತಿಳಿಸಿದ್ದಾರೆ.

ಸಚಿವ ಬಿ.ನಾಗೇಂದ್ರ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಅಗತ್ಯವಿಲ್ಲ. ಆದರೆ ಪಕ್ಷದ ಸರ್ಕಾರದ ಘನತೆ ಉಳಿಸಲು ಸ್ವಯಂ ಪ್ರೇರಿತರಾಗಿ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: DK Shivakumar, resignation, Minister, B. Nagendra