ಚನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಸ್ಪರ್ಧೆ ವಿಚಾರ: ಲೇವಡಿ ಮಾಡಿದ ಕೇಂದ್ರ ಸಚಿವ ಹೆಚ್.ಡಿಕೆ

ಬೆಂಗಳೂರು, ಜೂನ್ 21,2024 (www.justkannada.in):  ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಒಂದೂವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗಿರಲಿಲ್ಲ. ಈಗ ಚನ್ನಪಟ್ಟಣದ ಬಗ್ಗೆ ಮಮತೆ ಬಂದಿದೆ ಎಂದು  ಲೇವಡಿ ಮಾಡಿದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ದೆಹಲಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಗೆ ಚನ್ನಪಟ್ಟಣದ ಮೇಲೆ ಈವರೆಗೆ ಇಲ್ಲದ  ಮಮತೆ ಈಗ ಬಂದಿದೆ. ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್ ರನ್ನು ಯಾರು ತಡೆದಿಲ್ಲ.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕಡಿಮೆ ಸೀಟು ಬರಲು ಇವಿಎಂ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಹೆಚ್.ಡಿ ಕುಮಾರಸ್ವಾಮಿ,  ಕರ್ನಾಟಕದ ಲೋಕಸಭಾ ಫಲಿತಾಂಶಕ್ಕೆ ಇವಿಎಂ ಕಾರಣವಾದರೆ, 2023 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರ ಗೆದ್ದಿತ್ತಲ್ಲ, ಆಗ ಇವಿಎಂ ದೋಷವಿರಲಿಲ್ಲಲ್ವಾ? ಎಂದು ಟಾಂಗ್ ಕೊಟ್ಟರು.

Key words: DK Sivakumar, Channapatna, Union Minister, HDK