ಮೈಸೂರು,ಜೂನ್,28,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆಯಾಗಿರುವ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಹೀಗಾಗಿ ಕೋವಿಡ್ ಲಸಿಕಾ ಕೇಂದ್ರಗಳಿಗೆ ಸಾರ್ವಜನಿಕರು ಬರದಂತೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಪ್ರಸಾದ್ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಮೈಸೂರು ಡಿಎಚ್ ಒ ಪ್ರಸಾದ್, ಮೈಸೂರಿನಲ್ಲಿ ಕೋವಿಡ್ ಲಸಿಕೆ ಕೊರತೆಯಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಲಸಿಕಾ ಅಭಿಯಾನವನ್ನ ಸ್ಥಗಿತಗೊಳಿಸಿದ್ದೇವೆ. ಅದ್ದರಿಂದ ಸಾರ್ವಜನಿಕರು ಕೋವಿಡ್ ಲಸಿಕಾ ಕೇಂದ್ರಗಳಿಗೆ ಬರಬೇಡಿ. ಜುಲೈ 1ರ ನಂತರ ಲಸಿಕಾ ಅಭಿಯಾನ ಆರಂಭಿಸುತ್ತೇವೆ. ಸಾರ್ವಜನಿಕರು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
Key words: Do not -come covid vaccination- centers- public- Mysore-DHO -Prasad