ಬೆಂಗಳೂರು,ಮೇ,31,2019(www.justkannada.in): ಸಮ್ಮಿಶ್ರ ಸರ್ಕಾರ ಬೀಳಿಸುವ ಪ್ರಯತ್ನಕ್ಕೆ ಕೈ ಹಾಕದಂತೆ ಪಕ್ಷದ ವರಿಷ್ಠರು ನಮಗೆ ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ನವದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ. ಮೈತ್ರಿ ಸರ್ಕಾರ ಬೀಳಿಸುವ ಪ್ರಯತ್ನಕ್ಕೆ ಕೈ ಹಾಕಬೇಡಿ ಎಂದು ಸೂಚಿಸಿದ್ದಾರೆ. ಅಧಿಕಾರಕ್ಕಾಗಿ ನಾವು ಹಾತೊರೆಯಲ್ಲ. ಅದರ ಅಗತ್ಯವೂ ಇಲ್ಲ. ಮಧ್ಯಾಂತರ ಚುನಾವಣೆ ಬಗ್ಗೆ ಊಹಿಸಿಯೂ ಮಾತನಾಡಲ್ಲ. ವಿಪಕ್ಷ ಸ್ಥಾನದಲ್ಲಿ ಕುಳಿತು ಕೆಲಸ ಮಾಡುವ ಶಕ್ತಿ ನಮಗಿದೆ ಎಂದು ಹೇಳಿದರು.
‘ಹಾಗೆಯೇ ಮಾಜಿ ಸಿಎಂ ಸಿದ್ದರಾಮಯ್ಯ ನಾಲ್ಕು ಶಾಸಕರನ್ನ ಕಳುಹಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ನಡೆ ಮೇಲ್ನೋಟಕ್ಕೆ ಗೊತ್ತಾಗಿದೆ. ಹೀಗಾಗಿ ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈ ಹಾಕಬೇಡಿ ಎಂದು ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸಂಸದರಿಗೆ ಒಳ್ಳೆಯ ಖಾತೆಗಳೇ ಸಿಕ್ಕಿವೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಖಾತೆ ಸಿಗುವ ವಿಶ್ವಾಸವಿದೆ.ರಾಜ್ಯ ಸಂಸದರಿಗೆ ಸಿಕ್ಕಿರುವ ಖಾತೆ ನಮಗೆ ತೃಪ್ತಿ ತಂದಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದರು.
Key words: Do not try to drop the coalition government- High Command has been instructed- bs yeddyurappa
#coalitiongovernment #bjpHighCommand #bsyeddyurappa