ಬೆಂಗಳೂರು,ಜನವರಿ,4,2022(www.justkannada.in): ಕೊರೋನಾ ಹೆಚ್ಚಾದ ಹಿನ್ನೆಲೆ ಕಾಂಗ್ರೆಸ್ ಪಾದಯಾತ್ರೆ ಕೈಬಿಡುವಂತೆ ಮನವಿ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಲ್ಲ. ಈಗಾಗಲೇ ನಮ್ಮ ವಿರುದ್ಧ ಕೇಸ್ ಹಾಕಿದ್ದಾರೆ ಆದರೆ ಬಿಜೆಪಿಯವರು ಮೆರವಣಿಗೆ ಮಾಡುತ್ತಿದ್ದಾರಲ್ಲ ಅವರ ವಿರುದ್ಧ ಯಾಕೆ ಕೇಸ್ ಹಾಕಿಲ್ಲ. ಏನೇ ಆದರೂ ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಯಾರು ಎಷ್ಟೇ ಎದುರಿಸಿದರೂ ನಮ್ಮ ಪಾದಯಾತ್ರೆ ನಿಲ್ಲುವುದಿಲ್ಲ. ಜೈಲಿಗೆ ಹಾಕಿದರೂ ನಾವು ಹಿಂದೆ ಸರಿಯುವುದಿಲ್ಲ. ನಮ್ಮ ಮೇಲೆ 100 ಕೇಸ್ ಹಾಕಲಿ, ನೂರು ಬಾರಿ ಜೈಲಿಗೆ ಕಳುಹಿಸಲಿ ಹೆದರುವುದಿಲ್ಲ. ಜನರಿಗಾಗಿ ಹೋರಾಟ ಮಾಡುತ್ತಿದ್ದೇವೆ ಅದನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದರು.
ರಾಮನಗರದಲ್ಲಿ ಸಿಎಂ ಸಮ್ಮುಖದಲ್ಲಿ ನಿನ್ನೆ ನಿನ್ನೆ ನಡೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಸಚಿವ ಅಶ್ವಥ್ ನಾರಾಯಣ ಅವರ ನುಡಿಮುತ್ತುಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು, ಅಶೋಕ್ ಸೇರಿದಂತೆ ಹಲವು ಸಚಿವರು ಪ್ರಮಾಣ ಪತ್ರ ನೀಡಿದ್ದಾರೆ. ಅವರಿಗೆ ಇನ್ನಷ್ಟು ಬಡ್ತಿ ನೀಡಲಿ. ಸಚಿವರ ಸಂಸ್ಕೃತಿ ನಿನ್ನೆ ಅನಾವರಣಗೊಂಡಿದೆ. ಅವರ ವಿಶ್ವರೂಪ ಪ್ರದರ್ಶನವಾಗಿದೆ. ಬಿಜೆಪಿಯವರು ಅಶ್ವಥ್ ನಾರಾಯಣ ಅವರನ್ನು ಬೆಂಬಲಿಸಿ ರಾಜ್ಯದಲ್ಲಿ ಅಲ್ಲ. ರಾಷ್ಟ್ರದಲ್ಲೂ ಪ್ರತಿಭಟನೆ ಮಾಡಲಿ ಎಂದು ಟಾಂಗ್ ನೀಡಿದರು.
Key words: does not- stop-padayatre-kpcc-president-DK Shivakumar