ಬೆಳಗಾವಿ,ಮಾರ್ಚ್,6,2023(www.justkannada.in): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೀಕಿಸಿದ್ದು ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, ಆ ಮೆಂಟಲ್ ಕೇಸ್ ಬಗ್ಗೆ ನನ್ನ ಕೇಳಬೇಡಿ ಎಂದು ಟಾಂಗ್ ನೀಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ನಾನು ಕೇವಲ ಬೆಳಗಾವಿಗಷ್ಟೆ ಅಲ್ಲ ಇಡೀ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಇಡೀ ರಾಜ್ಯದಲ್ಲಿ ನಾವು ಪರಿಶುದ್ಧವಾದ ರಾಜಕಾರಣ ಮಾಡಬೇಕು. ಯಾವುದೇ ಮೆಂಟಲ್ ಕೇಸ್ ಗಳಿಗೆ ಉತ್ತರ ಕೊಡಲು ಆಗಲ್ಲ. ಹತಾಶೇಯಿಂದ ಇರುವವರಿಗೆ ನಾನು ಉತ್ತರ ಕೊಡಲು ಆಗಲ್ಲ ಎಂದರು.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ರಾಜ್ಯದೆಲ್ಲೆಡೆ ಭ್ರಷ್ಟಾಚಾರ ತಾಂಡವಾಡುತ್ತಿದೆ. ಚುನಾವಣೆ ಹತ್ತಿರವಾಗುತ್ತಿರುವುದರಿಂದ ಸಿಎಂ ಬೊಮ್ಮಾಯಿ ಅಲ್ಪಾವಧಿಯ ಟೆಂಡರ್ ಮತ್ತು ಕಾರ್ಯಾದೇಶಗಳನ್ನು ಪಾಸ್ ಮಾಡುವ ಮೂಲಕ ವಸೂಲಿ ಕೆಲಸ ಶುರುಮಾಡಿದ್ದಾರೆ. ತಾಲ್ಲೂಕು ಮತ್ತು ಎಲ್ಲಾಮಟ್ಟದ ಅಧಿಕಾರಿಗಳ ಒತ್ತಡ ಹೇರಲಾಗುತ್ತಿದೆ ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದರು.
Key words: Don’t ask –me- about -mental case-KPCC president -DK Shivakumar