ಬೆಂಗಳೂರು,ಮಾರ್ಚ್,6,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಬಳಿಕ ಆರು ಮಂದಿ ಸಚಿವರು ತಮ್ಮ ವಿರುದ್ಧದ ಯಾವುದೇ ಸುದ್ದಿ ಪ್ರಸಾರವಾಗದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತರಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದಂತೆ ಕಣ್ಣಿನಲ್ಲಿ ನೋಡಲಾಗದಂತ ಸಿಡಿ ಇದೆಯಂತೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೇ, ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಸಿಎಂ ಬಿಎಸ್ ವೈಗೆ ಟಾಂಟ್ ನೀಡಿದೆ.
ಈ ಮೂಲಕ ಸಿಎಂ ಯಡಿಯೂರಪ್ಪಗೆ ಸಂಪುಟದಲ್ಲಿನ ಸಚಿವರ ಸಿಡಿ ಪ್ರಕರಣ ಕುರಿತಂತೆ ಕಾಂಗ್ರೆಸ್ ಲೇವಡಿ ಮಾಡಿದೆ.
Key words: don’t -get – injunction – CM BS Yeddyurappa-Congress- Tong.