ಬೆಂಗಳೂರು,ಅಕ್ಟೋಬರ್,23,2020(www.justkannada.in) : ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆ ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸವಾಲು ಹಾಕಿದ್ದಾರೆ.
ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೊನಾ ಲಸಿಕೆ ಉಚಿತವಾಗಿ ಕೊಡಿಸಿ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಿರಾ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
key words : Do-you-have-Dham-gives-Corona-vaccine-free-
Siddaramaiah’s-challenge-Nalin Kumar Kateel