ಬೆಂಗಳೂರು,ಡಿಸೆಂಬರ್,13,2020(www.justkannada.in) : ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಹಾಗೂ ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
key words : Dr.Bannanje-Govindacharya-Died-CM B.S.Yeddyurappa-Condolences