ಬೆಂಗಳೂರು, ಜನವರಿ 02, 2021 (www.justkannada.in): ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ಶಾಲೆಗಳಿಗೆ ‘ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ’ ಎಂದು ಮರು ನಾಮಕರಣ ಮಾಡಲು ಸಕಾ೯ರ ಆದೇಶಿಸಿದೆ.
ಭಾರತದ ಸಶಕ್ತ ಸಂವಿಧಾನ ನೀಡಿದ ಶಿಲ್ಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಸಲಾಗುತ್ತಿರುವ ವಸತಿ ಶಾಲೆಗಳನ್ನು ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ ಮಕ್ಕಳಿಗೆ ಪ್ರಾಥಮಿಕ ಹಂತದ 1 ರಿಂದ 5 ನೇ ತರಗತಿವರೆಗಿನ ಶಿಕ್ಷಣವನ್ನು ನೀಡಲು ರಾಜ್ಯಾದ್ಯಂತ 68 ವಸತಿ ಶಾಲೆಗಳನ್ನು ನಡೆಸಲಾಗುತ್ತಿದೆ.